ಮಂಗಳೂರು ವಿವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟ: ಆಳ್ವಾಸ್‌ಗೆ ಸತತ 15ನೇ ಬಾರಿ ಸಮಗ್ರ ಪ್ರಶಸ್ತಿ

ಮಂಗಳೂರು ವಿವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟ: ಆಳ್ವಾಸ್‌ಗೆ ಸತತ 15ನೇ ಬಾರಿ ಸಮಗ್ರ ಪ್ರಶಸ್ತಿ


ಮೂಡುಬಿದಿರೆ: ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ 11 ಚಿನ್ನ, 7 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡರು. 

ಫಲಿತಾಂಶ: 

ಪುರುಷರ ವಿಭಾಗದಲ್ಲಿ: 

ದೇವರಾಜು-61 ಕೆಜಿ ವಿಭಾಗದಲ್ಲಿ (ದ್ವಿತೀಯ), ನಿಖಿಲ್-65 ಕೆಜಿ ವಿಭಾಗದಲ್ಲಿ (ಪ್ರಥಮ), ರಾಕೇಶ್ -70 ಕೆಜಿ ವಿಭಾಗದಲ್ಲಿ (ಪ್ರಥಮ), ಗುಡ್ಡಪ್ಪ -74 ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು -79 ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ-86 ಕೆಜಿ ವಿಭಾಗದಲ್ಲಿ (ದ್ವಿತೀಯ), ರೇವಣ್ ಕುಮಾರ್ -86 ಕೆಜಿ ವಿಭಾಗದಲ್ಲಿ (ತೃತೀಯ), ಪ್ರಜ್ವಲ್ -92 ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ -97 ಕೆಜಿ ವಿಭಾಗದಲ್ಲಿ (ಪ್ರಥಮ), ರಕ್ಷಿತ್ ರಾವ್- 97+ ಕೆಜಿ ವಿಭಾಗದಲ್ಲಿ (ಪ್ರಥಮ) ಸ್ಥಾನ ಪಡೆದರು. 

ಮಹಿಳೆಯರ ವಿಭಾಗದಲ್ಲಿ: 

ತ್ರಿವೇಣಿ -50 ಕೆಜಿ ವಿಭಾಗದಲ್ಲಿ (ದ್ವಿತೀಯ), ಚಂದ್ರಿಕಾ-53 ಕೆಜಿ ವಿಭಾಗದಲ್ಲಿ (ಪ್ರಥಮ), ಶಾಮಲಾ-55 ಕೆಜಿ ವಿಭಾಗದಲ್ಲಿ (ಪ್ರಥಮ), ಗ್ರೀಷ್ಮಾ-57 ಕೆಜಿ ವಿಭಾಗದಲ್ಲಿ (ಪ್ರಥಮ), ಚೈತ್ರಾ -59 ಕೆಜಿ ವಿಭಾಗದಲ್ಲಿ (ಪ್ರಥಮ), ಮನ್ವಿತಾ -62 ಕೆಜಿ ವಿಭಾಗದಲ್ಲಿ (ದ್ವಿತೀಯ), ಮೃದುಲಾ-65 ಕೆಜಿ ವಿಭಾಗದಲ್ಲಿ (ದ್ವಿತೀಯ), ಮಾನ್ಯ -68 ಕೆಜಿ ವಿಭಾಗದಲ್ಲಿ (ದ್ವಿತೀಯ), ಪ್ರಣ್ವಿಕಾ -72 ಕೆಜಿ ವಿಭಾಗದಲ್ಲಿ (ದ್ವಿತೀಯ), ಮಲ್ಲಮ್ಮ -76 ಕೆಜಿ ವಿಭಾಗದಲ್ಲಿ (ತೃತೀಯ) ಸ್ಥಾನ ಗಳಿಸಿದರು. 

ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article