ಅ.18: ಶ್ರೀ ಮಹಾವೀರ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಸ್ಪರ್ಧೆ
Thursday, October 16, 2025
ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜಿನಲ್ಲಿ ಅ.೧೮ ರಂದು ಮಹಾತ್ಮಾ ಗಾಂಧೀ ವಿಚಾರಧಾರೆ ಕುರಿತು ಎಸ್. ಡಿ. ಸಾಮ್ರಾಜ್ಯ ಸ್ಮಾರಕ ಮಂಗಳೂರು ವಿ. ವಿ. ಮಟ್ಟದ ಅಂತರ್ ಕಾಲೇಜು ಭಾಷಣ ಸ್ಪರ್ಧೆ ನಡೆಯಲಿದೆ.
ಕಾಲೇಜಿನ ಹಳೆ ವಿದ್ಯಾರ್ಥಿ ಡಾ. ಆಶೀರ್ವಾದ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಮೂಡುಬಿದಿರೆ ಶಾಖೆಯ ಪ್ರಬಂಧಕರಾದ ತುಳಸಿ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಪ್ರೇಮನಾಥ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.