ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Saturday, October 11, 2025
ಮೂಡುಬಿದಿರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 20 ಅಂಗನವಾಡಿ ಕಾರ್ಯಕರ್ತೆ ಹಾಗೂ 58 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಗಳ ಹುದ್ದೆಗೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
194 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಲಭ್ಯವಾಗಿರುವುದಿಲ್ಲ. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಅಕ್ಟೊಬರ್ 20 ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಉರ್ವ ಮಾರ್ಕೆಟ್ ಬಿಲ್ಡಿಂಗ್, 3 ನೇ ಮಹಡಿ ಇಲ್ಲಿ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳೂರು ಗ್ರಾಮಾಂತರ ಇವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.