ಆಳ್ವಾಸ್ನಲ್ಲಿ ಕೃಷಿ ವಿಜ್ಞಾನ ಮತ್ತು ಆಹಾರ ತಂತ್ರಜ್ಞಾನ ಪದವಿ ಕೋಸ್೯ ಆರಂಭ: ಡಾ. ಎಂ. ಮೋಹನ ಆಳ್ವ
ಕರಾವಳಿ ಕನಾ೯ಟಕದಲ್ಲಿ ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನವನ್ನು ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು ಇಂತಹ ವಿಜ್ಞಾನ ಶಿಕ್ಷಣವನ್ನು ನೀಡುತ್ತಿರುವ ಪ್ರಥಮ ಸಂಸ್ಥೆಯಾಗಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗ ಶಾಲೆಗಳು, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದಲ್ಲಿ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ತಾಂತ್ರಿಕ ಜ್ಞಾನ, ನುರಿತ ಬೋಧಕ ವೃಂದ ಹಾಗೂ ಕೈಗಾರಿಕಾ ತರಬೇತಿಯಂತಹ ಉತ್ತಮ ಸೌಲಭ್ಯಗಳನ್ನು ಒದಗಿಸಲಿದೆ.
ಸಂಸ್ಥೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಮೈಲುಗಲ್ಲು ಈಗಾಗಲೇ ಮಂಗಳೂರು ವಿವಿ, ರಾಜೀವ್ ಗಾಂಧಿ ವಿವಿ, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿವಿಗಳ ಪಠ್ಯಕ್ರಮಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಸಂಸ್ಥೆಗೆ, ಕೃಷಿ ಮತ್ತು ಆಹಾರ ತಂತ್ರಜ್ಞಾನ ವಿಭಾಗಗಳ ಸೇರ್ಪಡೆಯು ಮತ್ತೊಂದು ಮೈಲುಗಲ್ಲಾಗಿದೆ ಎಂದರು.
ಈ ಮಹತ್ವದ ಕೋರ್ಸ್ಗಳನ್ನು ಆರಂಭಿಸಲು ಮಾರ್ಗದರ್ಶನ ನೀಡಿದ ಕರ್ನಾಟಕ ರಾಜ್ಯದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಸಿ. ಜಗದೀಶ ಮತ್ತು ಕುಲಸಚಿವರಾದ ಡಾ. ಕೆ.ಸಿ. ಶಶಿಧರ ಅವರ ಸಹಕಾರವನ್ನು ಸಂಸ್ಥೆಯು ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದರು.
2025 ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9448458334 ಅಥವಾ 8050585606 ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಆಳ್ವಾಸ್ ಪದವಿ( ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಉಪಸ್ಥಿತರಿದ್ದರು.