ಸಾಹಿತ್ಯದಿಂದ ಪಡೆದ ಹಣವನ್ನು ಸಮಾಜಕ್ಕೆ ಹಿಂತಿರುಗಿಸಿದ ಕೀತಿ೯ ಭೈರಪ್ಪನವರಿಗೆ ಸಲ್ಲುತ್ತದೆ: ಡಾ. ಅಜಕ್ಕಳ ಗಿರೀಶ್ ಭಟ್
Friday, October 17, 2025
ಮೂಡುಬಿದಿರೆ: ಕನ್ನಡ ಸಾರಸ್ವತ ಲೋಕದಲ್ಲಿ ಅತ್ಯಂತ ಹೆಚ್ಚು ರಾಯಧನ(ರಾಯಲ್ಟಿ) ಪಡೆಯುತ್ತಿದ್ದವರು ಎಸ್.ಎಲ್. ಭೈರಪ್ಪನವರು. ಸಾಹಿತ್ಯದಿಂದ ಪಡೆದ ಹಣವನ್ನು ಸಂಪೂರ್ಣವಾಗಿ ಸಮಾಜಕ್ಕೆ ಹಿಂದಿರುಗಿಸಿದ ಕೀರ್ತಿಯು ಭೈರಪ್ಪರವರಿಗೆ ಸಲ್ಲುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್ ಹೇಳಿದರು.
ಅವರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕನ್ನಡ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ಘಟಕದ ಸಹಯೋಗದಲ್ಲಿ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆದ ನುಡಿನಮನ ಕರ‍್ಯಕ್ರಮದಲ್ಲಿ ಡಾ. ಎಸ್ ಎಲ್ ಭೈರಪ್ಪರವರ ವ್ಯಕ್ತಿತ್ವ ಮತ್ತು ಬರಹಗಳಲ್ಲಿನ ಜೀವನ ಮೌಲ್ಯಗಳ ಕುರಿತು ಮಾತನಾಡಿದರು.
ಅವರ ಕಾದಂಬರಿಗಳಲ್ಲಿ ದೇಶ ಪ್ರೇಮ, ಪರಿಸರ ಪ್ರೇಮ, ಪ್ರಾಣಿ ದಯೆ, ಸ್ನೇಹ, ಕಾಳಜಿ, ಜೀವನಾನುಭವ ಅಡಕವಾಗಿದ್ದವು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಕೆ., ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಜೀವನ್ ರಾಮ್ ಸುಳ್ಯ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಕಾಯ೯ಕ್ರಮ ನಿರೂಪಿಸಿದರು. ಪ್ರನುಷ ವಂದಿಸಿದರು.
