ಕನಾ೯ಟಕ ಅನುದಾನ ರಹಿತ ಪ. ಪೂ. ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ದ. ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಯುವರಾಜ್ ಜೈನ್ ಅಧಿಕಾರ
Friday, October 17, 2025
ಮೂಡುಬಿದಿರೆ: ನೂತನವಾಗಿ ರಚನೆಯಾಗಿರುವ ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ (KUPMA) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕಳೆದ ಒಂದುವರೆ ದಶಕಗಳಿಂದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ನೂರಾರು ಕುಟುಂಬಗಳಿಗೆ ಉದ್ಯೋಗವನ್ನು ಒದಗಿಸಿರುವ ಯುವರಾಜ್ ಜೈನ್ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಚಿಂತನೆಗಳಿಗೆ ರಾಷ್ಟ್ರಪತಿಯವರು ಈ ಹಿಂದೆ ಭೈರಾದೇವಿ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಯುವರಾಜ್ ಜೈನ್ ಮತ್ತು ದಕ್ಷಿಣ ಕನ್ನಡ ಘಟಕದ ನೂತನ ಪದಾಧಿಕಾರಿಗಳು ಅಕ್ಟೋಬರ್ 19 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ 'ದಿ ಓಷನ್ ಪರ್ಲ್' ಸಭಾಂಗಣದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ಐ. ಭೋಜೆಗೌಡ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.