
ಗಾಂಧಿ ವಿಚಾರಧಾರೆ: ಅಂತರ್ ಕಾಲೇಜು ಭಾಷಣ ಸ್ಪರ್ಧೆ: ಭುವನೇಂದ್ರ ಕಾಲೇಜಿನ ಸಿಂಚನ ಕೆ.ಎಸ್. ಪ್ರಥಮ, ಬೆಳ್ತಂಗಡಿಯ ಹೆಚ್. ವಷಾ೯ ದ್ವಿತೀಯ
ಸುರತ್ಕಲ್ ಗೋವಿಂದ ದಾಸ ಕಾಲೇಜಿನ ತೇಜಸ್ವಿನಿ ಕರ್ಕೇರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಕ್ಷಿತಾ ಹಾಗೂ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಭಾಗ್ಯ ಸಮಾಧಾನಕರ ಬಹುಮಾನವನ್ನು ಗಳಿಸಿದರು.
ಸಮಾರೋಪ ಸಮಾರಂಭದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಮೂಡುಬಿದಿರೆ ಶಾಖೆಯ ಮುಖ್ಯ ಪ್ರಬಂಧಕರಾದ ತುಳಸಿ ಹಾಗೂ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇಲ್ಲಿಯ ದೈಹಿಕ ಶಿಕ್ಷಕ ಪ್ರೇಮನಾಥ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಹುಮಾನ ವಿತರಿಸಿದರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿಜಯಲಕ್ಷ್ಮಿ, ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಹರೀಶ್, ಮಾನವಿಕ ಸಂಘದ ಸಂಯೋಜಕಿ ಗೀತಾರಾಮಕೃಷ್ಣ. ವಿದ್ಯಾರ್ಥಿ ಸಂಘದ ನಾಯಕಿ ಸಾಕ್ಷಿ ಶೆಟ್ಟಿ. ಸಾಕ್ಷಿ ಉಪಸ್ಥಿತರಿದ್ದರು.
ನಿಟ್ಟೆ ವೃತ್ತಿಪರ ಶಿಕ್ಷಣ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಪ್ರದೀಪ್ ಕೆ.ಎಸ್. ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅವಿನಾಶ್ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಮುನಿಯಲು ಹೆಬ್ರಿಯ ಉಪನ್ಯಾಸಕಿ ಜಯಶ್ರೀ ತೀರ್ಪುಗಾರರಾಗಿ ಸಹಕರಿಸಿದರು.
ವಿದ್ಯಾರ್ಥಿಗಳಾದ ಫ್ಲೋರಿನ್ ಸ್ವಾಗತಿಸಿದರು. ಮಾನವಿಕ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಸಾಕ್ಷಿ ಕಾರ್ಯಕ್ರಮ ನಿರೂಪಿಸಿದರು.ರಂಜಿತ್ ವಂದಿಸಿದರು.