ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಎಕ್ಸಲೆಂಟ್ ಮೂಡುಬಿದಿರೆಯ ರಶ್ಮಿತಾ ಶೆಟ್ಟಿ ಪ್ರಥಮ
Thursday, October 9, 2025
ಮೂಡುಬಿದಿರೆ: ರಂಗಸಂಸ್ಕೃತಿ ಹುಬ್ಬಳ್ಳಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಗಾಂಧೀಜಿಯವರ ತತ್ವಾದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. 'ಗಾಂಧೀ ಚಿಂತನೆ ಮತ್ತು ಯುವ ಜನತೆ' ಎಂಬ ವಿಷಯದ ಕುರಿತು ಸ್ಪರ್ಧೆ ನಡೆಯಿತು.
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.