ಯುವಕರು ಬದಲಾವಣೆಯ ಹರಿಕಾರರಾಗಲಿ: ಬ್ರಿಜೇಶ್ ಚೌಟ
ಅವರು ಆಳ್ವಾಸ್ ಇಂಜಿನಿಯರಿoಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದಿರೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಮತ್ತು ಸ್ಟೆಮ್ ಕುರಿತು ಐದು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಜೀವನದಲ್ಲಿ ಯಶಸ್ವಿಯಾದ ಪ್ರತೀ ವ್ಯಕ್ತಿಗಳು, ತಮ್ಮ ಜೀವನದ ಆರಂಭದಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ನಂತಹ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಈ ಸಂಘಟನೆಗಳು ಸಾಮಾಜಿಕ ಜೀವನದ ನಿಜವಾದ ಅರ್ಥವನ್ನು ತಿಳಿಸಲು ನೆರವಾಗುತ್ತವೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕಾರ್ಯಾಗಾರದಲ್ಲಿ ಪಡೆದ ತರಬೇತಿ ಹಾಗೂ ಅನುಭವವನ್ನು, ಕೌಶಲ್ಯ ವೃದ್ಧಿಗೆ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮಂಗಳೂರನ್ನು ಜಾಗತಿಕ ಮಟ್ಟದ ‘ಸಿಲಿಕಾನ್ ವ್ಯಾಲಿ’ಯಾಗಿ ರೂಪಿಸುವಲ್ಲಿನ ಸಂಸದರ ಕಾಯ೯ ನಿಜಕ್ಕೂ ಶ್ಲಾಘನೀಯ ಎಂದರು.
ಕಾರ‍್ಯಗಾರದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ನವದೆಹಲಿ ಮಾಜಿ ನಿರ್ದೇಶಕ ಕೃಷ್ಣಸ್ವಾಮಿ, ಕ್ಯಾಂಪ್ ಲೀಡರ್ ಅವಲೇಂದ್ರ ಶರ್ಮಾ, ಸ್ವಸ್ತಿಕ್ ಬಿಸಿನೆಸ್ ಸ್ಕೂಲ್ ನ ನಿರ್ದೇಶಕ ಡಾ.ರಾಘವೇಂದ್ರ ಹೊಳ್ಳ, ಉದ್ಯಮಿ ಈಶ್ವರ್ ಶೆಟ್ಟಿ, ಎಂಬಿಎ ವಿಭಾಗದ ಮುಖ್ಯಸ್ಥೆ ಪ್ರಿಯಾ ಸಿಕ್ವೇರಾ, ಹಾಗೂ ಎಐ ಮತ್ತು ಎಂಎಲ್ ವಿಭಾಗದ ಮುಖ್ಯಸ್ಥ ಡಾ ಹರೀಶ್ ಕುಂದರ್ ಇದ್ದರು. ತ್ರಿಷಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
