ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆತ ಆತಂಕಕಾರಿ

ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆತ ಆತಂಕಕಾರಿ

ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆದ ಪ್ರಯತ್ನ ಬಹಳಷ್ಟು ಆತಂಕಕಾರಿಯಾಗಿದೆ. ನ್ಯಾಯವಾದಿಯಾಗಿ ತನ್ನ ಪ್ರತಿರೋಧಕ್ಕೆ ಇತರ ನ್ಯಾಯಿಕ ಮಾರ್ಗವನ್ನು ಅನುಸರಿಸದೆ, ಹಿಂಸಾತ್ಮಕ ಮತ್ತು ಅತ್ಯಂತ ನೀಚ ಮಾರ್ಗ ಅನುಸರಿಸಿರುವುದು ಅನಾಹುತಕಾರಿ ಬೆಳವಣಿಗೆಯಾಗಿದೆ ಎಂದು ಕ್ರಿಶ್ಚನ್ ಯೂನಿಯನ್ ಅಧ್ಯಕ್ಷ ಮೌರೀಸ್ ಮೌರೀಸ್ ಮಸ್ಕರೇನಿಯಸ್ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಸೋಮವಾರ ಅವರು ಮಾತನಾಡಿ, ಸುಪ್ರಿಂ ಕೋರ್ಟ್ ನ್ಯಾಯ ಮೂರ್ತಿಗಳು ಯಾವುದೇ ರಾಜಕೀಯ ಪಕ್ಷದ ಜತೆ ಸಂಬಂಧ ಹೊಂದಿರುವುದಿಲ್ಲ. ರಾಜಕೀಯ ಪಕ್ಷ ಒಂದರ ಬೆಂಬಲಿಗರು ಇದನ್ನು ಖಂಡಿಸುವ ಬದಲು ಬೆಂಬಲಿಸುತ್ತಿದ್ದಾರೆ. ಕೃತ್ಯ ಎಸಗಿದ ದುಷ್ಕರ್ಮಿಯ ಹಿಂದಿನ ಸೂತ್ರದಾರರು ಯಾರು? ದೇಶದ ಅಮಾಯಕ ಜನರ ತಲೆಯಲ್ಲಿ ಮನುಷ್ಯ ವಿರೋಧಿ ಮನಸ್ಥಿತಿ ತುಂಬುತ್ತಿರುವವರು ಯಾರು? ನ್ಯಾಯಾಧೀಶರ ಮೇಲಿನ ದಾಳಿ ಅತ್ಯಂತ ಖಂಡನೀಯವಾಗಿದೆ. ಗವಾಯಿಯವರ ಬೆನ್ನಿಗೆ ದೇಶದ ಪ್ರಜ್ಞಾವಂತ ಜನರು ಗಟ್ಟಿಯಾಗಿ ನಿಲ್ಲಬೇಕಿದೆ. ಡಾ. ರಾಕೇಶ್ ಕಿಶೋರ್ ರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಪುನರಾವರ್ತನೆಯಾಗದ ರೀತಿಯಲ್ಲಿ ಕ್ರಮಕೈಗೊಳ್ಳುವಂತೆ ಎಂದು ಅವರು ಆಗ್ರಹಿಸಿದರು.

ಗೌರವ ಸಲಹೆಗಾರ ಜೆರೋನಿಯಸ್ ಪಾಯಸ್, ಉಪಾಧ್ಯಕ್ಷ ವಾಲ್ಟರ್ ಡಿಸೋಜ, ನಿಯೋಜಿತ ಅಧ್ಯಕ್ಷ ಜೋಕಿಂ ಲೂಯಿಸ್, ಸದಸ್ಯ ವಲೇರಿಯನ್ ಡಿಸೋಜ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article