ಮಂಗಳೂರು ವಿ.ವಿ ಮಟ್ಟದ ಅಂತರ್ ಕಾಲೇಜು ಭಾಷಣ ಸ್ಪರ್ಧೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ಪ್ರಶಸ್ತಿ
Tuesday, October 28, 2025
ಪುತ್ತೂರು: ಮೂಡುಬಿದಿರೆಯ ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧೀಜಿ ಕನಸಿನ ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ’ ಎಂಬವಿಷಯದ ಬಗ್ಗೆ ಇತ್ತೀಚೆಗೆ ನಡೆದ ಎಸ್.ಡಿ. ಸಾಮ್ರಾಜ್ಯ ಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಶ್ರೀವಿದ್ಯಾ ಎನ್ ತೃತೀಯ ಸ್ಥಾನಪಡೆದು ಪ್ರಶಸ್ತಿ ಮತ್ತು ನಗದು ಬಹುಮಾನಗಳಿಸಿದ್ದಾರೆ.
ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೋಂತೆರೋ ಅಭಿನಂದಿಸಿದರು. ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ 30 ವಿದ್ಯಾರ್ಥಿಗಳು ಭಾಗವಹಿಸಿದ್ದರು.