ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಪುತ್ತೂರು: ಮೂರು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ನಡೆಸಿದ ದೌರ್ಜನ್ಯಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಆರೋಪಿ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿ ಚೇತನ್ ಹೆಚ್ ಬಿ ಅವರ ಆರೋಪ ಸಾಬೀತಾಗಿದ್ದು, ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2022ರ ಜ.14ರಂದು ಆರೋಪಿ ಚೇತನ್ ಹೆಚ್ ಬಿ ಎಂಬಾತ ಅಪ್ರಾಪ್ತ ಬಾಲಕಿಯೋರ್ವರನ್ನು ಏರ್‌ಟೆಲ್ ನೆಟ್‌ವರ್ಕ್ ತೋರಿಸುವ ನೆಪದಲ್ಲಿ ಆಕೆಯನ್ನು ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಸುಳ್ಯ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ ಆರ್ ಅವರು ಪ್ರಕರಣದ ತನಿಖೆ ನಡೆಸಿ ಮಾನ್ಯ ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬಗ್ಗೆ ವಿವರವಾದ ಸಾಕ್ಷ್ಯ ನೀಡಿರುತ್ತಾರೆ. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪ್ರಕರಣವನ್ನು ತನಿಖೆ ನಡೆಸಿ ಪ್ರಕರಣದಲ್ಲಿ ಒಟ್ಟು 14 ಸಾಕ್ಷಿಗಳನ್ನು ವಿಚಾರಿಸಲಾಗಿತ್ತು.. ಬಾಲಕಿಯು ಆರೋಪಿ ವಿರುದ್ದ ಸವಿವರವಾದ ಹೇಳಿಕೆ ನೀಡಿದ್ದಳು. 

ನ್ಯಾಯಾಧೀಶೆ ಸರಿತಾ ಡಿ.ಅವರು ಇತ್ತಂಡಗಳ ವಾದ ಆಲಿಸಿ ಆರೋಪಿಗೆ  ಅಪರಾಧಕ್ಕೆ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ. 10ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ವಿಧಿಸಿರುತ್ತಾರೆ. ದಂಡದ ಮೊತ್ತದಲ್ಲಿ ರೂ.5 ಸಾವಿರವನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಲಾಗಿದೆ. ನೊಂದ ಬಾಲಕಿಗೆ ರೂ. 30ಸಾವಿರವನ್ನು ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯವು ಆದೇಶಿಸಿದೆ. ಸರ್ಕಾರದ ಪರ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ಅವರು ವಾದಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article