ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಪ್ರೋಗ್ರಾಮ್
ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ಅವರು ಕಾಲೇಜಿನಲ್ಲಿ ಉನ್ನತ ಶಿಕ್ಷಣದ ಮಹತ್ವವನ್ನು ತಿಳಿಸಿ ಕಾಲೇಜಿನಲ್ಲಿ ಲಭ್ಯವಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಯಶಸ್ವಿಯಾಗಿರಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಶೈಕ್ಷಣಿಕ ಕುಲಸಚಿವ ಡಾ. ನಾರ್ಬರ್ಟ್ ಮಸ್ಕರೇನಸ್ರವರು ಕಾಲೇಜಿನ ಎಂಸಿಎ ವಿಭಾಗಕ್ಕೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಅವರಿಗೆ ಶುಭಕೋರಿದರು.
ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ಅವರ ಪ್ರಥಮ ವರ್ಷದ ಪರೀಕ್ಷೆಗಳ ಅಂಕಪಟ್ಟಿಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಅಂಕಪಟ್ಟಿಗಳ ವಿತರಣಾ ಕಾರ್ಯಕ್ರಮವನ್ನು ಕಾಲೇಜಿನ ಪರೀಕ್ಷಾಂಗ ಉಪಕುಲಸಚಿವ ಕಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೇರ ನಿರ್ವಹಿಸಿದರು.
ಅಪೂರ್ವ ಮತ್ತು ಬಳಗದವರು ಪ್ರಾರ್ಥಿಸಿದರು. ಎಂಸಿಎ ವಿಭಾಗದ ಡೀನ್ ಡಾ. ವಿನಯಚಂದ್ರ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ವಂದಿಸಿದರು. ಡಾ. ಗೀತಾ ಪೂರ್ಣಿಮಾ ಕೆ. ಕಾರ್ಯಕ್ರಮ ನಿರೂಪಿಸಿದರು. ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನೀಲಮ್ ಕುಟ್ಟಪ್ಪ ಹಾಗೂ ಶೋಧನ್ ಪಿಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಐದು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
.jpg)
.jpg)