ಅಪ್ರಾಪ್ತ ಪುತ್ರಿಯನ್ನು ಗರ್ಭಿಣಿಯಾಗಿಸಿದ ತಂದೆ: ಬಂಧನ
Friday, October 31, 2025
ಪುತ್ತೂರು: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಗರ್ಭಿಣಿಯಾಗಿಸಿದ ಘಟನೆಯೊಂದು ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ನಡೆಸಿದ್ದು, ಆರೋಪಿ ತಂದೆಯನ್ನು ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ತಂದೆಯೇ ತನ್ನ ಪುತ್ರಿಯನ್ನು ಗರ್ಭಿಣಿಯಾಗಿಸಿದ ಆತಂಕಕಾರಿ ಘಟನೆಗೆ ಸಂಬಂಧಿಸಿ ನೀಡಲಾದ ದೂರಿನಂತೆ ಪುತ್ತೂರಿನ ಮಹಿಳಾ ಠಾಣೆಯ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯನ್ನು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.