ಹೆಜ್ಜೇನು ದಾಳಿಗೆ ಬಾಲಕಿ ಬಲಿ
Saturday, October 11, 2025
ಪುತ್ತೂರು: ಸೇಡಿಯಾಪು ಕೂಟೇಲು ಸಮೀಪ ಶಾಲೆ ಮುಗಿಸಿ ತೆರಳುತ್ತೆರುವಾಗ ಹೆಚ್ಚೇನು ದಾಳಿ ಮಾಡಿ ಮೂವರು ಗಾಯಗೊಂಡಿದ್ದು, ಈ ಪೈಕಿ ಓರ್ವ ಬಾಲಕಿ ಮೃತಪಟ್ಟಿದ್ದಾಳೆ.
ಸೇಡಿಯಾಪು ಕೂಟೇಲು ನಿವಾಸಿ ಜಿಶಾ(7) ಮೃತ ಬಾಲಕಿ. 5ನೇ ತರಗತಿ ಬಾಲಕಿ ಪ್ರತ್ಯೂಶ್ (10), ಸ್ಥಳೀಯ ನಿವಾಸಿ ನಾರಾಯಣ ಗೌಡ (55) ಗಾಯಗೊಂಡಿದ್ದಾರೆ.
ಅ.10ರಂದು ಸಂಜೆ ವಾಹನದಿಂದ ಇಳಿದು ನಡೆದು ಸಾಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಬೊಬ್ಬೆ ಕೇಳಿ ಸ್ಥಳೀಯರಾದ ನಾರಾಯಣ ಗೌಡ ರಕ್ಷಣೆ ತೆರಳಿದ್ದು ಅವರ ಮೇಲೆಯೂ ದಾಳಿ ನಡೆಸಿದೆ. ಮೂವರನ್ನು ಪುತ್ತೂರು ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ವರ್ಗಾಯಿಸಲಾಗಿತ್ತು. ದಿಶಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪ್ರತ್ಯೂಶ್ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ನಾರಾಯಣ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.