ದಾನಗಳಲ್ಲಿ ರಕ್ತದಾನ ಅತ್ಯಂತ ಶ್ರೇಷ್ಠ ದಾನ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಅವರು ರವಿವಾರ ಶಿರ್ವ ಮೋನಿಸ್ ಕಾಂಪ್ಲೆಕ್ಷ್‌ನಲ್ಲಿ ಏರ್ಪಡಿಸಿದ ‘ಬೃಹತ್ ರಕ್ತದಾನ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್(ನಿ) ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಅತಿಥಿಗಳಾಗಿ ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್, ಉಡುಪಿ ಸಹಕಾರಿ ಭಾರತಿ ಅಧ್ಯಕ್ಷ ದಿನೇಶ್ ಹೆಗ್ಡೆ ಶುಭ ಹಾರೈಸಿದರು.
ಅಭಯಹಸ್ತ ಚಾರಿಟೇಬಲ್ ಟ್ರಸ್ಟ್‌ನ ಸತೀಶ್ ಸಾಲಿಯಾನ್, ಪರಿಸರದ ವಿವಿಧ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರುಗಳಾದ ಸಚ್ಚಿದಾನಂದ ಹೆಗ್ಡೆ ಸೊರ್ಕಳ, ವಿಶ್ವನಾಥ ಪೂಜಾರಿ, ಪದ್ಮಾವತಿ ಪೂಜಾರಿ, ಪ್ರಕಾಶ್ ಶೆಟ್ಟಿ, ಸಂತೋಷ್ ಶೆಟ್ಟಿ ಕೋಡು, ದಯಾನಂದ ಪಾಟ್ಕರ್, ರಕ್ತದಾನಿ ಹಾಗೂ ಶಿಬಿರದ ಸಂಘಟಕ ದೇವದಾಸ್ ಪಾಟ್ಕರ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ವೀರೇಂದ್ರ ಪಾಟ್ಕರ್ ಸಹಿತ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್(ನಿ) ಉಡುಪಿ, ಸಹಯೋಗದೊಂದಿಗೆ ರಕ್ತನಿಧಿ ಕೆ.ಎಂ.ಸಿ ಮಣಿಪಾಲ ಸಹಕಾರದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲೆ, ಶಿರ್ವ ಹಾಲು ಉತ್ಪಾದಕರ ಸಹಕಾರಿ ಸಂಘ, ಪಂಜಿಮಾರು ಹಾಲು ಉತ್ಪಾದಕರ ಸಹಕಾರಿ ಸಂಘ, ಎಡ್ಮೇರು ಹಾಲು ಉತ್ಪಾದಕರ ಸಹಕಾರಿ ಸಂಘ, ಚಂದ್ರನಗರ ಹಾಲು ಉತ್ಪಾದಕರ ಸಹಕಾರಿ ಸಂಘ, ಕುತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘ, ಮುದರಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘ. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ) ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರು ಸಹಭಾಗಿತ್ವ ನೀಡಿದ್ದರು.
ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಶಿರ್ವ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಪ್ರಸನ್ನಕುಮಾರ್ ವಂದಿಸಿದರು.
ಶಿಬಿರದಲ್ಲಿ 135 ಯುನಿಟ್ ರಕ್ತ ಸಂಗ್ರಹವಾಯಿತು.