ಬೆಳ್ಳೆ ಗ್ರಾಮ ಪಂಚಾಯತ್: ವಿಶೇಷ ಗ್ರಾಮಸಭೆ
Wednesday, October 8, 2025
ಶಿರ್ವ: ಬೆಳ್ಳೆ ಗ್ರಾಮ ಪಂಚಾಯತ್ 2026-27ನೇ ಸಾಲಿಗೆ ಕೆಳ ಹಂತದ ಯೋಜನೆಗಳೊಂದಿಗೆ ವಾರ್ಷಿಕ ಜಿಲ್ಲಾ ಕರಡು ಅಭಿವೃದ್ಧಿ ಯೋಜನೆ ರೂಪಿಸುವ ‘ವಿಶೇಷ ಗ್ರಾಮ ಸಭೆ’ ನಡೆಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಸಭೆಯ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ದಿವ್ಯಾ ವಿ. ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಉಪಾಧ್ಯಕ್ಷ ಶಶಿಧರ ವಾಗ್ಲೆ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಅಶೋಕ್, ಪಂಚಾಯತ್ ಸದಸ್ಯರಾದ ರಾಜೇಂದ್ರ ಶೆಟ್ಟಿ, ಸುಧಾಕರ ಪೂಜಾರಿ, ಹರೀಶ್ ಶೆಟ್ಟಿ, ಗುರುರಾಜ ಭಟ್, ಶಿಲ್ಪಾ, ಪಂ.ಕಾರ್ಯದರ್ಶಿ ಆನಂದ ಕುಲಕರ್ಣಿ, ಲೆಕ್ಕ ಸಹಾಯಕ ಸದಾನಂದ ಪೂಜಾರಿ, ಇಲಾಖೆಯ ಅಧಿಕಾರಿಗಳು, ಸಂಜೀವಿನಿ ಸ್ವಸಹಾಯ ಗುಂಪುಗಳ ಪ್ರಮುಖರು ಮತ್ತು ಸದಸ್ಯರು, ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು, ವಿವಿಧ ಇಲಾಖಾ ಪ್ರತಿನಿಧಿಗಳು, ಉಪಸ್ಥಿತರಿದ್ದು, ಆನ್‌ಲೈನ್ ತರಬೆತಿ ಕಾರ್ಯಕ್ರಮದಲ್ಲಿ ಕೂಡಾ ಭಾಗವಹಿಸಿದ್ದರು.
ಗ್ರಾಮದಲ್ಲಿ ನಡೆಯಬೇಕಾದ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ವಿವಿಧ ಇಲಾಖೆಗಳ ಬೇಡಿಕೆಗಳನ್ನು ಸೇರಿಸಿ ಸಿದ್ಧಪಡಿಸಲಾಯಿತು.