ಕುಮಾರಧಾರ ಸ್ನಾನಘಟ್ಟದಲ್ಲಿ ಸ್ನಾನ ಮಾಡಲು ಹಾಕಲಾಗಿದ್ದ ನಿರ್ಬಂಧ ತೆರವು
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದಲ್ಲಿ ಸ್ನಾನ ಮಾಡಲು ಹಾಕಲಾಗಿದ್ದ ನಿರ್ಬಂಧವನ್ನು ತೆರವು ಮಾಡಿ ಸೋಮವಾರ ಕಡಬ ತಹಶೀಲ್ದಾರ್ ಹಾಗೂ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಮಾರಧಾರ ನದಿ ಸ್ನಾನ ಘಟ್ಟದಲ್ಲಿ ಮುಂಗಾರು ಮಳೆಯ ಸಂದರ್ಭ ನೀರಿನ ಮಟ್ಟಹೆಚ್ಚಾಗಿದ್ದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಕ್ತಾಧಿಗಳು ಸ್ನಾನಘಟ್ಟಕ್ಕೆ ಇಳಿದು ಸ್ನಾನ ಮಾಡುವುದನ್ನು ನಿರ್ಬಂಧಿಸಲಾಗಿತ್ತು.
ಪ್ರಸ್ತುತ ಮಳೆ ಕಡಿಮೆ ಆಗಿರುವುದರಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಬರೆದು ಸ್ನಾನ ಮಾಡಲು ಇರುವ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದ್ದರು. ಪ್ರಸ್ತುತ ಮಳೆ ಕಡಿಮೆ ಆಗಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸುತ್ತಾ ಸ್ನಾನಘಟ್ಟದಲ್ಲಿ ಸ್ನಾನ ಮಾಡಲು ಹಾಕಿರುವ ನಿರ್ಬಂಧ ತೆರವು ಗೊಳಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.