ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಿಗೆ ಅಭಿನಂದನೆ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಪ್ರಾಂಶುಪಾಲರಾದ ಪ್ರೊ.ಕೆ.ವಿ.ದಾಮೋದರ ಗೌಡ ಸನ್ಮಾನ ನೆರವೇರಿಸಿದರು.
ನಿವೃತ್ತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲ ಅಭಿನಂದನಾ ಭಾಷಣ ಮಾಡಿದರು.ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ತಹಶೀಲ್ದಾರ್ ಎಂ.ಮಂಜುಳ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಪುತ್ತೂರು ರಾಮಕೃಷ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ಎಂ.ಪಾಲಚಂದ್ರ ಗೌಡ, ಕೆ.ಆರ್.ಗಂಗಾಧರ, ಜೇನು ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಪ್ರಮುಖರಾದ ಡಾ.ಬಿ.ರಘು, ಪಿ.ಸಿ.ಜಯರಾಮ, ರಾಜೀವಿ ಆರ್.ರೈ, ರಾಧಾಕೃಷ್ಣ ಬೊಳ್ಳೂರು, ಅಶೋಕ್ ಎಡಮಲೆ, ಚಂದ್ರಶೇಖರ ಪೇರಾಲು, ಪಿ.ಎಸ್.ಗಂಗಾಧರ, ಎಸ್.ಸಂಶುದ್ದೀನ್, ಅಬೂಬಕ್ಕರ್ ಅಡ್ಕಾರ್, ಅಬ್ದುಲ್ ಹಮೀದ್ ಜನತಾ, ಆದಂ ಹಾಜಿ ಕಮ್ಮಾಡಿ, ಎಪಿಎಂಸಿ ಕಾರ್ಯದರ್ಶಿ ರವೀಂದ್ರ, ಮೊಹಮ್ಮದ್.ಕೆ.ಎಂ.ಎಸ್, ಮೂಸ ಕುಂಞಿ ಪೈಂಬೆಚ್ಚಾಲ್, ಕೆ.ಟಿ.ವಿಶ್ವನಾಥ, ಸಿದ್ದಿಕ್ ಕೊಕ್ಕೊ, ಶರೀಫ್ ಕಂಠಿ, ಮತ್ತಿತರರು ಉಪಸ್ಥಿತರಿದ್ದರು.
ಅಭಿನಂದನಾ ಸಮಿತಿಯ ಪದಾಧಿಕಾರಿಗಳಾದ ಸದಾನಂದ ಮಾವಜಿ ಸ್ವಾಗತಿಸಿ, ಕೆ.ಎಂ.ಮುಸ್ತಫ ವಂದಿಸಿದರು. ಸಂಧ್ಯಾ ಮಂಡೆಕೋಲು ನಾಡಗೀತೆ ಹಾಡಿದರು.ನಿಸಾರ್ ಕಾರ್ಯಕ್ರಮ ನಿರೂಪಿಸಿದರು.
ಅಭಿನಂದನಾ ಸಮಿತಿಯ ವತಿಯಿಂದ, ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.