ಕಲ್ಚರ್ಪೆ ತ್ಯಾಜ್ಯ ಘಟಕದ ಅವ್ಯವಸ್ಥೆ: ನ.ಪಂ. ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ

ಕಲ್ಚರ್ಪೆ ತ್ಯಾಜ್ಯ ಘಟಕದ ಅವ್ಯವಸ್ಥೆ: ನ.ಪಂ. ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ


ಸುಳ್ಯ: ಸುಳ್ಯ ನಗರ ಪಂಚಾಯತ್‌ನ ತ್ಯಾಜ್ಯ ವಿಲೇವಾರಿ ಘಟಕ ಕಲ್ಚರ್ಪೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಕಲ್ಚರ್ಪೆಯ ಸ್ಥಳೀಯ ನಿವಾಸಿಗಳು ನಗರ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ಕಲ್ಚರ್ಪೆಯ ತ್ಯಾಜ್ಯ ಘಟಕದಲ್ಲಿ ಬರ್ನಿಂಗ್ ಕಾರ್ಯ ನಡೆಯದೇ ತ್ಯಾಜ್ಯ ತುಂಬಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿಯಿದೆ ಎಂದು ಪ್ರಮುಖರು ನಗರ ಪಂಚಾಯತ್ ಮುಂಭಾಗದಲ್ಲಿ ಕುಳಿತು ಪ್ರತಿಭಟಿಸಿದರು.

ಕಲ್ಚರ್ಪೆ ಘನ ತ್ಯಾಜ್ಯ ಘಟಕದಲ್ಲಿ ತ್ಯಾಜ್ಯ ಬರ್ನಿಂಗ್ ಕಾರ್ಯಗಳು ನಡೆಯುತ್ತಿಲ್ಲ, ಪ್ಲಾಸ್ಟಿಕ್ ಮಾತ್ರ ಉರಿಸಲಾಗುತ್ತದೆ. ಅಲ್ಲದೇ ಅಲ್ಲಿ ದುರ್ನಾತ ಬೀರುತ್ತಿದೆ ಎಂದು ಅವರು ಹೇಳಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಮತ್ತು ಮುಖ್ಯಾಧಿಕಾರಿ ಬಸವರಾಜ್ ಹೆಚ್.ಆರ್. ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಟೆಂಡರ್ ಮಾಡಿ ಕಲ್ಚರ್ಪೆಯಿಂದ ಕಸ ಸಾಗಾಟ ಮಾಡಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಪ್ರತಿಭಟನಾ ನಿರತರಿಗೆ ತಿಳಿಸಿದರು.

ಪ್ರಮುಖರಾದ ಅಶೋಕ್ ಪೀಚೆ, ಬಾಲಚಂದ್ರ ಕಲ್ಚರ್ಪೆ, ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಸುದೇಶ್ ಅರಂಬೂರು, ನಾರಾಯಣ ಜಬಳೆ ಕಲ್ಚರ್ಪೆ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article