ಅ.4 ರಂದು ಸಪ್ತತಿ ಜನ್ಮದಿನಾಚರಣೆ, ವಿದ್ಯಾರ್ಥಿ ವೇದಿಕೆ ಉದ್ಘಾಟನೆ
Thursday, October 2, 2025
ಉಡುಪಿ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿ ಕಾಲೇಜಿನ ಮಹಾಪೋಷಕರಾದ ನಾಡೋಜ ಡಾ. ಜಿ ಶಂಕರ ಅವರ ಸಪ್ತತಿ ಜನ್ಮದಿನಾಚರಣೆ ಮತ್ತು ಕಾಲೇಜಿನ ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಕಾರ್ಯಕ್ರಮವು ಅ.4 ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಪಿ.ಜಿ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ನಾಡೋಜ ಡಾ. ಜಿ ಶಂಕರ ಮುಖ್ಯ ಅತಿಥಿಯಾಗಿ ಭಾಗವಹಿಸಲ್ಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲ್ಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ರಾಜೇಂದ್ರ ಕೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕಾರ್ಯಕ್ರಮದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.