ಅ.24 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

ಅ.24 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ


ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಅ.24 ರಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.

ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ  ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.


ಸಭಾಕಾರ್ಯಕ್ರಮ:

ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.

ಶಾಸಕರುಗಳಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು.

ಹಿರಿಯ ನೌಕರರ ಸನ್ಮಾನ ಹಾಗೂ ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸುವರು.

ಹಬ್ಬದ ವಾತಾವರಣ: 

ದೀಪಾವಳಿ ಹಬ್ಬದ ಜೊತೆಗೆ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ ವರ್ಧಂತ್ಯುತ್ಸವದ ಅಂಗವಾಗಿ ಎಲ್ಲೆಲ್ಲೂ ಸಂಭ್ರಮ-ಸಡಗರದ ವಾತಾವರಣವಿದೆ.

ಬಸದಿ, ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ) ಅನ್ನಪೂರ್ಣ ಹಾಗೂ ವಸತಿಛತ್ರಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳು ಮತ್ತು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಿದ್ದು, ಕಣ್ಮನ ಸೆಳೆಯುತ್ತಿವೆ.

1968ರ ಅಕ್ಟೋಬರ್ 24 ರಂದು ಧರ್ಮಸ್ಥಳದ ಇಪ್ಪತ್ತೊಂದನೆ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಟ್ ಸಂಸ್ಥೆಗಳು, ಕೆರೆಗಳಿಗೆ ಕಾಯಕಲ್ಪ, ಉಚಿತ ಸಾಮೂಹಿಕ ವಿವಾಹ ಸಮಾರಂಭ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಹಾಗೂ ಆಯುರ್ವೇದಕ್ಕೆ ಪ್ರೋತ್ಸಾಹ, ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ, ರುದ್ರಭೂಮಿ ಮೊದಲಾದ ವಿನೂತನ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನದ ಮೂಲಕ ಉನ್ನತ ಸೇವೆ-ಸಾಧನೆ ಮಾಡಿ ಎಲ್ಲರ ಪ್ರೀತಿ-ವಿಶ್ವಾಸ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article