ಶೃಂಗೇರಿ ಸ್ವಾಮೀಜಿ ಧರ್ಮಸ್ಥಳ ಭೇಟಿ
Sunday, October 12, 2025
ಉಜಿರೆ: ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭಾನುವಾರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಿದಾಗ ಶ್ರೀಗಳನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಶ್ರೀಗಳು ಬಳಿಕ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದರು. ಬಳಿಕ ಹೆಗ್ಗಡೆಯವರ ನಿವಾಸದಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.










