ವಕೀಲ ಎಂ.ಕೆ. ವಿಜಯಕುಮಾರ್ ನಿಧನಕ್ಕೆ ಹೆಗ್ಗಡೆ ಸಂತಾಪ ಸಂದೇಶ
Sunday, October 5, 2025
ಉಜಿರೆ: ಕಾರ್ಕಳದ ಹಿರಿಯ ವಕೀಲ ಎಂ.ಕೆ. ವಿಜಯಕುಮಾರ್ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಜೈನಧರ್ಮದ ಬಗ್ಗೆ ಆಳವಾದ ಅಧ್ಯಯನ ಮಾಡಿದ ಅವರು ಉತ್ತಮ ವಾಗ್ಮಿಯಾಗಿ ಚಿರಪರಿಚಿತರಾಗಿದ್ದರು. ರಾಜಕೀಯ ರಂಗ, ಕಾನೂನು ಸೇವೆ, ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿಯೂ ಉತ್ತಮ ಸೇವೆ-ಸಾಧನೆ ಮಾಡಿದ್ದಾರೆ.
ಕಾರ್ಕಳದಲ್ಲಿ ನಡೆದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಉತ್ತಮ ಸೇವೆ ಮಾಡಿದ್ದರು. ಧರ್ಮಸ್ಥಳದ ಭಕ್ತರೂ, ಅಭಿಮಾನಿಯೂ ಆಗಿದ್ದ ಅವರು ನಮ್ಮ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯ ಸಹಕಾರ ನೀಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬ-ವರ್ಗದವರಿಗೆ ಉಂಟಾದ ದು:ಖವನ್ನು ಶಕ್ತಿ ತಾಳ್ಮೆಯನ್ನಿತ್ತು ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.