ದೇಶ ಸುಭಿಕ್ಷವಾಗಬೇಕಾದರೆ ಯುವಜನಾಂಗ ಸರಿದಾರಿಯಲ್ಲಿ ನಡೆಯುವುದು ಅತ್ಯಗತ್ಯ: ಅನಿಲ್ ಕುಮಾರ್ ಭೂಮರೆಡ್ಡಿ
ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ವಿದ್ಯಾರ್ಥಿಗಳು ತಾವು ಕೈಗೊಂಡಿರುವ ಪ್ರತಿಜ್ಞೆಯನ್ನು ಅರ್ಥಮಾಡಿಕೊಂಡು ಅದರಂತೆ ನಡೆದುಕೊಳ್ಳಬೇಕು. ನಿಮ್ಮ ಮೇಲಿನ ಸಮಾಜದ ಕಾಳಜಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಕೂಡ ಸ್ವಾಸ್ಥ್ಯ ಸಂಕಲ್ಪ ಯೋಜನೆಯಡಿ ಮದ್ಯವರ್ಜನ ಶಿಬಿರ, ಜನಜಾಗೃತಿ ವೇದಿಕೆ ಇತ್ಯಾದಿ ಕಾರ್ಯಕ್ರಮ ಮೂಲಕ ಸಮಾಜದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ ಎಂದರು.
ಮಂಗಳೂರು ವಿವಿ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶೇಷಪ್ಪ ಕೆ. ಅಮೀನ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಡ್ರಗ್ ಬಳಕೆ ಹೆಚ್ಚಳ ತಲೆತಗ್ಗಿಸುವ ವಿಚಾರ. ಇಂದು ಇಲ್ಲಿನ ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳಿಂದ ತಲಾ ೧೫ ಎನ್‌ಎಸ್‌ಎಸ್ ಸ್ವಯಂಸೇವಕರು ಆಗಮಿಸಿದ್ದಾರೆ. ವಿವಿ ವ್ಯಾಪ್ತಿಯ ಒಟ್ಟು ೧೦೬ ಕಾಲೇಜುಗಳಲ್ಲಿ ಈ ರೀತಿಯ ಕಾರ್ಯಕ್ರಮ ನಡೆಸಲಾಗುತ್ತಿದೆ. ವಿವಿ ವ್ಯಾಪ್ತಿಯ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕವು ವಿಶೇಷ ಖ್ಯಾತಿ ಪಡೆದಿದೆ. ಈ ಘಟಕವು ಹಲವು ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಹತ್ವದ ಕೊಡುಗೆಯನ್ನು ನೀಡಿದೆ ಎಂದರು.
ಉಪ ಪೊಲೀಸ್ ಅಧೀಕ್ಷಕ ಆಥಿSP ವಿಜಯಪ್ರಸಾದ್ ಮಾತನಾಡಿ, ಒಮ್ಮೆ ಡ್ರಗ್ಸ್ ಚಟಕ್ಕೆ ಬಲಿಯಾದರೆ ಹೊರಬರುವುದು ಕಷ್ಟ. ಹಾಗಾಗಿ ಇಂತಹ ದುಶ್ಚಟಗಳನ್ನು ರೂಢಿಸಿಕೊಳ್ಳದೆ ಉತ್ತಮ ಪ್ರಜೆಗಳಾಗಿ ಸಮಾಜದಲ್ಲಿ ಬದುಕಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಬದುಕಿನಲ್ಲಿ ನಿರ್ದಿಷ್ಟ ಗುರಿ ಹೊಂದಿ ಕನಸುಗಳನ್ನು ಈಡೇರಿಸಿಕೊಂಡು ಪ್ರಜ್ಞಾವಂತ ಪ್ರಜೆಗಳಾಗಿ ಬದುಕಬೇಕು ಎಂದರು.
ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಕಾರ್ಯಕ್ರಮವು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ೫೮ನೇ ಪಟ್ಟಾಭಿಷೇಕದ ದಿನದ ಅಂಗವಾಗಿ ನಡೆಯುತ್ತಿದೆ. ಹೆಗ್ಗಡೆ ಅವರ ನೇತೃತ್ವದಲ್ಲಿ ಹಲವು ಸಮಾಜಮುಖಿ ಕಾರ್ಯಗಳು ನಡೆಯುತ್ತಿದ್ದು, ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿವೆ ಎಂದರು.
ಕಾರ್ಯಕ್ರಮಕ್ಕೆ ಮೊದಲು, ‘ನಶೆಯೆಂಬ ನರಕ’ ಕಿರುಚಿತ್ರ ಪ್ರದರ್ಶಿಸಲಾಯಿತು. ಮಾದಕವ್ಯಸನದಿಂದ ದೂರವಿದ್ದು, ನಶಾ ಮುಕ್ತ ಭಾರತ ನಿರ್ಮಾಣಕ್ಕೆ ಶ್ರಮಿಸುವ ಕುರಿತು ವಿದ್ಯಾರ್ಥಿಗಳಿಗೆ ಅನಿಲ್ ಕುಮಾರ್ ಭೂಮರೆಡ್ಡಿ ಪ್ರಮಾಣವಚನ ಬೋಧಿಸಿದರು.
ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಕಾಲೇಜಿನಿಂದ ಆಗಮಿಸಿದ್ದ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಅಡಿಷನಲ್ ಎಸ್ಪಿ ಉತ್ತರಿಸಿದರು.
ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ಸ್ವಯಂಸೇವಕರು, ಉಪನ್ಯಾಸಕರು, ಜಿಲ್ಲೆಯ ವಿವಿಧ ಕಾಲೇಜಿನ ಎನ್ನೆಸ್ಸೆಸ್ ಸ್ವಯಂಸೇವಕರು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಎನ್‌ಎಸ್‌ಎಸ್ ಯೋಜನಾಧಿಕಾರಿ ಮಾಲಿನಿ ಅಂಚನ್ ವಂದಿಸಿದರು. ಮಾನ್ಯ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು.



