ಕಂಚಿ ಕಾಮಕೋಟಿ ಪೀಠದ ರಿಕ್ಷಾ ಧರ್ಮಸ್ಥಳಕ್ಕೆ ಕೊಡುಗೆ

ಕಂಚಿ ಕಾಮಕೋಟಿ ಪೀಠದ ರಿಕ್ಷಾ ಧರ್ಮಸ್ಥಳಕ್ಕೆ ಕೊಡುಗೆ


ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೆ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಶುಕ್ರವಾರ ಕಂಚಿಕಾಮಕೋಟಿ ಪೀಠದ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು.


ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆgವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು.


ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು.

ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article