ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ

ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ


ಉಳ್ಳಾಲ: ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಭಾರೀ ದಾಸ್ತಾನು ಇರಿಸಲಾಗಿದ್ದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿದ್ದು, ಸ್ಥಳೀಯರ ಸಮಯ ಪ್ರಜ್ನೆ ಮತ್ತು ಅಗ್ನಿಶಾಮಕದಳದ ಕಾರ್ಯಾಚರಣೆಯಿಂದಾಗಿ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿರುವ ಘಟನೆ ರಾ.ಹೆ. 66 ರ ತಲಪಾಡಿ ಸಮೀಪದ ಉಚ್ಚಿಲ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಉಚ್ಚಿಲದ ಅಂಡರ್ ಪಾಸ್ ಬಳಿಯ ಇಕ್ಬಾಲ್ ಹಾಗೂ ಇಬ್ರಾಹಿಂ ಅವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಹೊತ್ತಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿಯ ಕೆನ್ನಾಲಿಗೆಯು ವ್ಯಾಪಿಸಿದ್ದು ದಟ್ಟ ಹೊಗೆಯು ಉಚ್ಚಿಲ, ತಲಪಾಡಿ, ತೊಕ್ಕೊಟ್ಟು ಪ್ರದೇಶಗಳಿಗೆ ವ್ಯಾಪಿಸಿದೆ.

ಸ್ಥಳೀಯರು ಬಕೆಟ್‌ಗಳಿಂದ ನೀರನ್ನ ಚೆಲ್ಲಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿ ಶಾಮಕದಳದ ವಾಹನವು ಸ್ಥಳಕ್ಕೆ ವಿಳಂಬವಾಗಿ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಘಟನೆಯಿಂದ ಗುಜರಿ ಅಂಗಡಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿವೆ.

ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭಾ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ಭೇಟಿ ನೀಡಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ. 

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article