ಲಾರಿ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು
Wednesday, October 29, 2025
ಉಳ್ಳಾಲ: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಜೆ ರಾ.ಹೆ.66 ರ ತೊಕ್ಕೊಟ್ಟು ಓವರ್ ಬ್ರಿಡ್ಜ್‌ನಲ್ಲಿ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ಸರಕಾರಿ ಶಾಲಾ ಬಳಿಯ ನಿವಾಸಿ ರಾಮಚಂದ್ರ.ಬಿ(59) ಮೃತ ಪಟ್ಟವರು.
ರಾಮಚಂದ್ರ ಅವರು ಸೋಮವಾರದಂದು ಮದುವೆ ಸಮಾರಂಭದಲ್ಲಿ ಭಾಗವಹಿಸಿ ಓವರ್ ಬ್ರಿಡ್ಜ್ ಎಂಬಲ್ಲಿ ಉಳ್ಳಾಲದ ಬಸ್ಸಿನಿಂದ ಇಳಿದು ಹೆದ್ದಾರಿ ದಾಟುತ್ತಿದ್ದ ವೇಳೆ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಅಪಘಾತ ನಡೆಸಿದ ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.