ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ
Thursday, November 27, 2025
ಬೆಂಗಳೂರು: ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪ್ರಧಾನ ಗುರವಾರ ರಾಜಭವನದಲ್ಲಿ ನಡೆಯಿತು.
ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.
ರಾಜಭವನದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿ ಉಪಕುಲಪತಿ ಡಾ. ಜಯಕರ ಎಸ್.ಎಂ. ಕುಲಸಚಿವೆ ಕೆ.ಟಿ. ಶಾಂತಳಾ ಮತ್ತಿತರರು ಉಪಸ್ಥಿತರಿದ್ದರು.

