ಬಿ.ಸಿ.ರೋಡಿನಲ್ಲಿ ಏಕತಾ ಓಟ
Saturday, November 1, 2025
ಬಂಟ್ವಾಳ: ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸರ್ದಾರ್ ವಲ್ಲಭ ಭಾಯಿ ಪಟೇಲರ 150ನೇ ಜನ್ಮದಿನಾಚರಣೆ ಪ್ರಯುಕ್ತ ‘ರಾಷ್ಟ್ರೀಯ ಏಕತಾ ದಿವಸ್’ ಏಕತಾ ಓಟ ಶುಕ್ರವಾರ ನಡೆಯಿತು.
ಹೆಚ್ಚುವರಿ ಎಸ್ಪಿ ನವೀನ್ ಕುಮಾರ್ ಬೂಮಾರೆಡ್ಡಿ, ಇನ್ಸ್‌ಪೆಕ್ಟರ್ ಶಿವಕುಮಾರ್, ಲಯನ್ಸ್ ಮತ್ತು ವಿವಿಧ ವಿವಿಧ ರೋಟರಿ ಕ್ಲಬ್ ಸಹಿತ ಜೆಸಿಐ ಸಂಘಟನೆ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.