ಪತಿಯನ್ನು ಕೊಲ್ಲಲೆತ್ನಿಸಿದ ಪತ್ನಿಯ ನ್ಯಾಯಾಂಗ ಬಂಧನ
Saturday, November 22, 2025
ಬಂಟ್ವಾಳ: ಎರಡು ದಿನಗಳ ಹಿಂದೆ ಜವುಳಿ ಅಂಗಡಿಗೆ ಬುರ್ಖಾಧರಿಸಿಕೊಂಡು ಬಂದು, ಪತಿಯನ್ನು ಕತ್ತಿಯಿಂದ ಮಾರಣಾಂತಿಕ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪಿ ಜ್ಯೋತಿ ಎಂಬಾಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಗಾಯಾಳು ಕೃಷ್ಣಕುಮಾರ್ ಸೋಮಯಾಜಿ ಶುಕ್ರವಾರ ಮಧ್ಯಾಹ್ನದ ವೇಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಆಗಿದ್ದಾರೆ.
ಒಂದು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.