ಪೂರ್ವಾನುಮತಿ ಪಡೆಯದೆ ಕರ್ಕಶ ಡಿ.ಜೆ.: ಕೇಸು ದಾಖಲು
Monday, November 24, 2025
ಬಂಟ್ವಾಳ: ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಮದುವೆ ಕಾರ್ಯಕ್ರಮದಲ್ಲಿ ಕರ್ಕಶ ಡಿ.ಜೆ. ಬಳಸಿದ ಘಟನೆ ಬಂಟ್ವಾಳ-ಭಂಡಾರಿಬೆಟ್ಟು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.22 ರಂದು ರಾತ್ರಿ ಬಂಟ್ವಾಳ ಭಂಡಾರಿಬೆಟ್ಟು ಎಂಬಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿ ಹಾಗೂ ಕರ್ಕಶವಾಗಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ತೊಂದರೆಯಾಗುವಂತೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮದುವೆ ಕಾರ್ಯಕ್ರಮದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೇ, ಕರ್ಕಶವಾಗಿ ಡಿ.ಜೆ. ಧ್ವನಿವರ್ಧಕ ಬಳಸುತ್ತಿರುವುದು ಕಂಡು ಬಂದಿದೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.