ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸಿದಾತನ ಸೆರೆ
Monday, November 3, 2025
ಬಂಟ್ವಾಳ: ಮಡಂತ್ಯಾರು ಪೇಟೆಯಲ್ಲಿ ಭಾನುವಾರ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೂಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ವ್ಯಕ್ತಿಯನ್ನು ಸಂಕೇತ್ (28) ಎಂದು ಹೆಸರಿಸಲಾಗಿದೆ. ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್‌ಐ ಮತ್ತವರ ಸಿಬ್ಬಂದಿಗಳು ಬೆಳಗ್ಗೆ 10.45ರ ವೇಳೆಗೆ ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಪೇಟೆಯಲ್ಲಿ ಆರೋಪಿ ತೂರಾಡಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದನ್ನು ಕಂಡು ವಶಕ್ಕೆ ಪಡೆದು ವಿಚಾರಿಸಿದಾಗ ಆತ ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ.
ಆತನನ್ನು ಠಾಣೆಗೆ ಕರೆತಂದು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ಧ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.