ಗಣಿಗಾರಿಕೆ ಪರಿಶೀಲನೆಗೆ ಗ್ರಾ.ಪಂ.ನಿಂದ ಡಿ.ಸಿ.ಗೆ ಪತ್ರ ಬರೆಯಲು ನಿರ್ಧಾರ
ಬಂಟ್ವಾಳ: ತಾಲೂಕಿನ ತೆಂಕಕಜೆಕಾರು ಗ್ರಾಮದಲ್ಲಿ ನಡೆಯುತ್ತಿರುವ ಗಣಿಗಾರಿಕೆಗೆ ಸ್ಥಳೀಯರ ವಿರೋಧವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಬಡಗಕಜೆಕಾರು ಗ್ರಾ.ಪಂ. ಅಧ್ಯಕ್ಷ ದೇವದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುವಾರ ನಡೆದಗ್ರಾಮ ಪಂಚಾಯಿತಿಯ ಸಭೆಯಲ್ಲು ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗಣಿಗಾರಿಕೆ ನಡೆಸುತ್ತಿರುವ ಸ್ಥಳವನ್ನು ಶೀಘ್ರ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಲಿಖಿತ ಪತ್ರ ಬರೆಯಲು ನಿರ್ಣಯಿಸಲಾಗಿದ್ದು, ಗ್ರಾಮ ಪಂಚಾಯಿತಿ ಗ್ರಾಮಸ್ಥರ ಹಾಗೂ ನ್ಯಾಯದ ಪರವಾಗಿ ಯಾವತ್ತು ನಿಲ್ಲಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೆಂಕಕಜೆಕಾರು ಪ್ರದೇಶದಲ್ಲಿ ನಡೆಯುತ್ತಿದೆ ಯೆನ್ನಲಾದ ಅನಧಿಕೃತ ಕಪ್ಪುಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಅನುಭವಿಸುತ್ತಿರುವ ತೊಂದರೆಯ ಹಿನ್ನಲೆಯಲ್ಲಿ ರಾಜ್ಯ ಉಚ್ಛನ್ಯಾಯಾಲಯದ ಆದೇಶದಂತೆ ಅಧಿಕಾರಿಗಳ ತಂಡ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.
ಸ್ಫೋಟಕ ಮತ್ತು ರಾಸಾಯನಿಕಗಳ ಬಳಸಿ ಇಲ್ಲಿ ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ,ಸ್ಥಳೀಯಾಡಳಿತಕ್ಕೆ ದೂರು ನೀಡಿದರೂ ಸ್ಪಂದಿಸದ ಹಿನ್ನಲೆಯಲ್ಲಿ ಸ್ಥಳೀಯರು ಹೈಕೋಟ್೯ ಮೋರೆ ಹೋಗಿದ್ದರು.