ಕಾರ್ಕಳ ತಾಲೂಕು ಮಟ್ಟದ ಕ್ರೀಡಾಕೂಟ
ಅಧ್ಯಕ್ಷತೆಯನ್ನು ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಹೆಗ್ಡೆ ವಹಿಸಿದ್ದರು.
ಕ್ರೀಡಾಕೂಟ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಮಾತನಾಡಿ ಸಮಾಜದ ಸಾಮರಸ್ಯ ಕಾಪಾಡಲು ಕ್ರೀಡೆ ಸಹಕಾರಿಯಾಗಿದೆ ಎಂದರು ಅತಿಥಿಗಳಾಗಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಉದ್ಯಮಿ ಪುರಂದರ ಪೂಜಾರಿ, ಯೋಗಿಶ್ ಮಲ್ಯ, ಗಜಾನಂದ, ಮುಂಡಾರು ಪ್ರಸನ್ನ ಶೆಟ್ಟಿ, ಹೆಬ್ರಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ ಸೆರ್ವೆಗಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ, ಪ್ರಾಂಶುಪಾಲ ಬಾಬುರಾಯ ಕಾಮತ್, ಕಾರ್ಕಳ ಸಾಹಿತ್ಯ ಸಂಘ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಉಪಸ್ಥಿತರಿದ್ದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ದಯಾನಂದ ಹೆಗ್ಡೆ ಸ್ವಾಗತಿಸಿದರು. ಶಿಕ್ಷಕ ಸುರೇಶ್ ಮರಕಾಲ ಕಾರ್ಯಕ್ರಮ ನಿರೂಪಿಸಿದರು. ಕಡ್ತಲ ಗ್ರಾ.ಪಂ. ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ ದಾನಿಗಳ ಪಟ್ಟಿ ವಾಚಿಸಿದರು. ಪಥ ಸಂಚಲನದಲ್ಲಿ ಜ್ಞಾನ ಸುಧಾ ಪ್ರಥಮ, ಕುಚ್ಚೂರು ದ್ವೀತಿಯ, ನಿಟ್ಟೆ ಎನ್ ಎಸ್ ಎ ಎಂ ತೃತೀಯ ಸ್ಥಾನ ಪಡೆದುಕೊಂಡಿದೆ.