ಕುಂಬಳೆಯಲ್ಲಿ ಅಪಘಾತ: ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಕುಂಬಳೆಯಲ್ಲಿ ಅಪಘಾತ: ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಕುಂಬಳೆ: ಆಲ್ಟೋ ಕಾರು ಮತ್ತು ಥಾರ್ ಜೀಪು ನಡುವೆ ಉಂಟಾದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಸಮೀಪದ ಮುಟ್ಟಂನಲ್ಲಿ ನಡೆದಿದೆ. ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮಂಜೇಶ್ವರ ಮಚ್ಚಂಪಾಡಿ ಕೋಡಿಯ ಸಿ.ಪಿ. ಫಾತಿಮ್ಮತ್ ಮಿರ್ಜನಾ (28) ಮೃತಪಟ್ಟ ಮಹಿಳೆ. ಕಾರಿನಲ್ಲಿದ್ದ ಮಚ್ಚಂಪಾಡಿಯ ಹುಸೈನ್ ಸಹದಿ (34), ಮರಿಯಮ್ಮತ್ ಝಕಿಯ್ಯಾ (15), ಜುಮಾನ (19) ಮತ್ತು ಅಬ್ದುಲ್ ಸಾಲಿಂ (3) ಗಾಯಗೊಂಡವರು ಎಂದು ತಿಳಿದು ಬಂದಿದೆ.

ಮುಂದಿನಿಂದ ಚಲಿಸುತ್ತಿದ್ದ ಕಾರು ಒಮ್ಮೆಲೇ ಬ್ರೇಕ್ ಹಾಕಿದ ಸಂದರ್ಭದಲ್ಲಿ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ರಾತ್ರಿ 7.45 ರ ಸುಮಾರಿಗೆ ಅಪಘಾತ ನಡೆದಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜು ಗುಜ್ಜಾಗಿದೆ. ಥಾರ್ ಜೀಪು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ. ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article