ಡಾ. ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಡಾ. ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ


ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿಯವರು ನ.1 ರಂದು ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ, ಜಾನಪದ ಅಧ್ಯಯನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ  ಮಾಡಿರುವ ಡಾ. ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು 2025ರ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್ ಹಾಗೂ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣ  ಸಮಿತಿಯ ಅಧ್ಯಕ್ಷೆ ಹಾಗೂ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ವಹಿಸಿದರು. 

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಇದರ ಅಧ್ಯಕ್ಷ  ಎಂ.ಎ. ಗಪೂರ್, ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article