ಬಾಲಕಾರ್ಮಿಕರು ಕಂಡುಬಂದಲ್ಲಿ 1098 ಗೆ ಕರೆ ಮಾಡಿ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜ್, ಉರ್ವ, ಮಂಗಳೂರು ಇವರ ಸಹಯೋಗದಲ್ಲಿ ನಡೆದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಪ್ರಸ್ತುತ ತಿದ್ದುಪಡಿ ಕಾಯ್ದೆ 2016ಕ್ಕೆ ಸಂಬಂಧಿಸಿದ ಪ್ರಾವಧಾನ, ಮಾನವ ಕಳ್ಳ ಸಾಗಾಣಿಕೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಕಾನೂನು ಅರಿವು ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬಾಲಕಾರ್ಮಿಕರು ಕಂಡುಬಂದಲ್ಲಿ ತಕ್ಷಣವೇ 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.
ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ ಮಾತನಾಡಿ, ಬಾಲಕಾರ್ಮಿಕ ನಿಯಂತ್ರಣ ಕಾಯ್ದೆಯ ಉದ್ದೇಶ ನಮ್ಮ ದೇಶದ ಪ್ರತಿಯೊಬ್ಬ ಮಕ್ಕಳಿಗೂ ಉಜ್ವಲ ಭವಿಷ್ಯ ಸಮಾನ ಹಕ್ಕುಗಳು ಮತ್ತು ಸಂತೋಷಕರ ಬಾಲ್ಯ ಒದಗಿಸುವ್ಯದಾಗಿದೆ. 6-14 ವರ್ಷದ ಮಕ್ಕಳು ಕಡ್ಡಾಯ ಶಿಕ್ಷಣವನ್ನು ಪಡೆದುಕೊಳ್ಳುವಂತೆ ಸಭೆಗೆ ತಿಳಿಸಿದರು. ಮುಂದುವರಿದು 18 ವರ್ಷದ ಒಳಗಿನ ಮಕ್ಕಳು ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರಾಗಿ ದುಡಿಯುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್ ಹೆಲ್ಪ್ ಲೈನ್ ಉಚಿತ ದೂರವಾಣಿ ಸಂಖ್ಯೆ:1098 ಗೆ ಕರೆ ಮಾಡುವಂತೆ ತಿಳಿಸಿದರು.
ಎಸ್.ಸಿ.ಎಸ್ ಸಮೂಹ ಸಂಸ್ಥೆ ಆಡಳಿತ ಅಧಿಕಾರಿ ಯು.ಕೆ. ಖಲೀದ್ ಅಧ್ಯಕ್ಷತೆ ವಹಿಸಿದ್ದರು.
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಉರ್ವ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕ ಗುರುಕಾಂತಿ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಕುರಿತು ಕಾರ್ಮಿಕ ಅಧಿಕಾರಿ ಬಿ. ಆರ್ ಕುಮಾರ್ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ದತ್ತು ನಿಯಮಾವಳಿಗಳ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕುಮಾರ್ ಶೆಟ್ಟಿಗಾರ್ ಉಪನ್ಯಾಸಗಳನ್ನು ನೀಡಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಶ್ರೀನಿವಾಸ್, ದಕ್ಷಿಣ ಕನ್ನಡ ಜಿಲ್ಲೆ ಎಸ್.ಸಿ.ಎಸ್ ಕಾಲೇಜಿನ ಪ್ರಾಂಶುಪಾಲ ಹಾರ್ದಿಕ್ ಪಿ ಚೌಹಾನ್, ಹಿರಿಯ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ ಉಪಸ್ಥಿತರಿದ್ದರು.