ನಾಳೆ ವಿವಿ ಕಾಲೇಜಿನಲ್ಲಿ ಅಟ್ಟಿಲ್-2025

ನಾಳೆ ವಿವಿ ಕಾಲೇಜಿನಲ್ಲಿ ಅಟ್ಟಿಲ್-2025

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರವಾಸೋದ್ಯಮ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಯುಕ್ತ ಆಶ್ರಯದಲ್ಲಿ ನ.5 ರಂದು ಅಟ್ಟಿಲ್-2025 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಬೆಳಗ್ಗೆ 10.30ಕ್ಕೆ ತುಳು ಚಿತ್ರನಟ ತುಳುನಾಡಿನ ಮಾಣಿಕ್ಯ ಅರವಿಂದ ಬೋಳಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಅವರು ವಹಿಸಲಿದ್ದು, ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಜಗದೀಶ್, ಐಕ್ಯುಎಸಿ ಸಂಯೋಜಕ ಡಾ. ಸಿದ್ಧರಾಜು ಎಂ. ಎನ್. ಹಾಗೂ ವಿಭಾಗದ ಉಪನ್ಯಾಸಕರು ಉಪಸ್ಥಿತರಿರುತ್ತಾರೆ.

ವೇದಿಕೆ ಕಾರ್ಯಕ್ರಮದ ನಂತರ ಕಾಲೇಜಿನಲ್ಲಿ ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article