ಡಾ.ಎಂ.ಎನ್. ರಾಜೇಂದ್ರ ಕುಮಾರ್‌ಗೆ ’ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ-2025’ ಪ್ರದಾನ
ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಈ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ’ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ -2025’ ಪ್ರಶಸ್ತಿಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಪ್ರೋ.ಡಾ.ಎಸ್.ಚಂದ್ರಶೇಖರ್ ಶೆಟ್ಟಿ ಅವರು ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ’ ಕರ್ನಾಟಕ ಸಂಭ್ರಮ’ ಸಮಾರಂಭದಲ್ಲಿ ಪ್ರದಾನ ಮಾಡಿದರು.
ಡಾ.ಎಂ,ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ ಸುಮಾರು 45 ವರ್ಷಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವಧರ್ಮಿಯರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇವರು ಸಹಕಾರ ಕ್ಷೇತ್ರ ಮತ್ತು ಸಾಮಾಜಿಕ ಸೇವಾ ವಲಯದಲ್ಲಿಗೈದ ಅತ್ಯುನ್ನತ ಸಮಾಜ ಸೇವೆಗೆ ಇದೀಗ ’ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ’ ಗೆ ಪಾತ್ರರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಎಸ್.
ಸಚ್ಚಿದಾನಂದ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು , ಭಾರತೀಯ ವಾಯು ಸೇನೆಯ ವಿಶ್ರಾಂತ ಏರ್ ವೈಸ್ ಮಾರ್ಷಲ್ ಬಿ.ಕೆ.ಮುರಳಿ , ಗ್ಲೋಬಲ್ ಸಾಯಿ ಫೌಂಡೇಶನ್ ಸಂಸ್ಥೆಯ ಕೋಶಾಧಿಕಾರಿ ಲವೀನಾ ಜನಾರ್ಧನ, ಡಿ.ಎ.ಪಾಂಡು ಮೆಮೋರಿಯಲ್ ಆರ್.ವಿ.ಡೆಂಟಲ್ ಕಾಲೇಜು ಬೆಂಗಳೂರು ಇದರ ವಿಶ್ರಾಂತ ಸಂಸ್ಥಾಪಕ ಪ್ರಾಂಶುಪಾಲರಾದ ಡಾ.ಕೆ.ಎಸ್.ನಾಗೇಶ್, ದಿ . ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಇದರ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್, ಗೌರವ ಅಧ್ಯಕ್ಷರಾದ ಎ. ನಾರಾಯಣಮೂರ್ತಿ ಹಾಗೂ ಅಧ್ಯಕ್ಷರಾದ ಗಣೇಶ್ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.