ಬಾಲಕಾರ್ಮಿಕ ರಕ್ಷಣೆಯ ಕಾರ್ಯಾಚರಣೆ: 3 ಕಿಶೋರ ಕಾರ್ಮಿಕರು ಪತ್ತೆ
Tuesday, November 4, 2025
ಮಂಗಳೂರು: ಸಾರ್ವಜನಿಕರ ದೂರಿನ ಮೇರೆಗೆ ನಗರದ ಸ್ಟೇಟ್‌ಬ್ಯಾಂಕ್, ಹಂಪನಕಟ್ಟೆ, ಬಂದರ್, ಸೆಂಟ್ರಲ್ ಮಾರ್ಕೆಟ್ ಮುಂತಾದ ಕಡೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈಲ್ಡ್ ಹೆಲ್ಪ್‌ಲೈನ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ 3 ಸಂಸ್ಥೆಗಳಲ್ಲಿ ೩ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.
ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್ಲೈನ್:1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆ:- 0824-2435343, 2433132, 2437479 ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ದೂರವಾಣಿ ಸಂಖ್ಯೆ 2433131 ಗೆ ಕರೆ ಮಾಡಿ ತಿಳಿಸಬಹುದು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.