ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ತೆಗೆದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ: ವಾಟಾಳ್ ನಾಗರಾಜ್
Sunday, November 23, 2025
ಮಂಗಳೂರು: ಮುಖ್ಯಮಂತ್ರಿ ಯಾರು ಬೇಕಾದರೂ ಆಗಬಹುದು. ಆದರೆ ಸಿದ್ದರಾಮಯ್ಯರನ್ನು ಈಗ ಯಾಕೆ ಬದಲಿಸಬೇಕು ಎಂಬುದಕ್ಕೆ ಉತ್ತರ ಬೇಕಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಅವರಿಗೆ ತಕ್ಕುದಾದ ವ್ಯಕ್ತಿ ಕಾಂಗ್ರೆಸ್ ನಲ್ಲಾಗಲಿ, ಬಿಜೆಪಿ ಅಥವಾ ಜೆಡಿಎಸ್ ನಲ್ಲಿ ಇಲ್ಲ. ಹಾಗಾಗಿ ಅವರ ಸ್ಥಾನಕ್ಕೆ ರಾಜಕೀಯವಾಗಿ ಬೇರೆ ಯಾರನ್ನೇ ತಂದರೂ ದೊಡ್ಡ ಕ್ರಾಂತಿ ಆಗಲಿದೆ. ಸಾವಿರಾರು ಜನ ಜೈಲಿಗೆ ಹೋಗಲು ಸಿದ್ಧ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಭಿಪ್ರಾಯಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಿ ಏಳು ವರ್ಷಗಳ ಆಡಳಿತ ನಡೆಸಿದ ಹಿರಿಮೆ ಅವರಿಗಿದೆ. ಉಪ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿ 14 ಬಾರಿ ಆಯ-ವ್ಯಯ ಮಂಡಿಸಿದ್ದಾರೆ. ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಗೌರವ, ಶಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯುವುದು ಸಾಧುವಲ್ಲ. ಹೈಕಮಾಂಡ್ ಈ ಕಾರ್ಯಕ್ಕೆ ಕೈಹಾಕಿದರೆ ಬೆಂಕಿ ಜೊತೆ ಸರಸವಾಡಿದಂತೆ ಎಂದು ಅವರು ಹೇಳಿದರು.