ವಿದ್ಯಾರ್ಥಿಗಳ ಕೊರತೆ: ನಾಲ್ಕು ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ: ಪ್ರೊ. ಪಿ.ಎಲ್. ಧರ್ಮ

ವಿದ್ಯಾರ್ಥಿಗಳ ಕೊರತೆ: ನಾಲ್ಕು ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ: ಪ್ರೊ. ಪಿ.ಎಲ್. ಧರ್ಮ


ಮಂಗಳೂರು: ಮಂಗಳೂರು ವಿವಿ ಕೊಣಾಜೆ ಕ್ಯಾಂಪಸ್‌ನಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಸುದಿಗೋಷ್ಠಿಯಲ್ಲಿ ತಿಳಿಸಿದರು.

ಸಂಖ್ಯಾಶಾಸ್ತ್ರ, ಎಚ್‌ಆರ್‌ಡಿ, ಎಂಸಿಜೆ (ಪತ್ರಿಕೋದ್ಯಮ), ಎಲೆಕ್ಟ್ರಾನಿಕ್ಸ್ ವಿಭಾಗಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಎಂಸಿಜೆ ವಿಭಾಗಕ್ಕೆ ಕೇವಲ ಒಬ್ಬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದರು. ವಿಭಾಗವನ್ನು ನಡೆಸಲು ಕನಿಷ್ಠ 100-15 ವಿದ್ಯಾರ್ಥಿಗಳಾದರೂ ಬೇಕು. ಈ ಕುರಿತು ವಿದ್ಯಾರ್ಥಿಗೆ ಆಡಳಿತಾತ್ಮಕ ಸಮಜಾಯಿಶಿ ನೀಡಲಾಗಿದೆ ಎಂದು ತಿಳಿಸಿದರು.

ವಿವಿಗೆ ಪಂಚಾಯ್ತಿಯಿಂದ ಕಂದಾಯ ವಿಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುವ ಕಟ್ಟಡಗಳಿಗೆ ಮಾತ್ರ ಕಂದಾಯ ವಿಧಿಸಬಹುದೇ ಹೊರತು ಸೇವಾ ವಿಭಾಗಗಳಿಗೆ ವಿಧಿಸಬಾರದು. ಈ ಕುರಿತು ಸ್ಪೀಕರ್ ಅವರ ಬಳಿ ಮಾತುಕತೆ ನಡೆಸಲಾಗಿದೆ. ಸರಿಯಾಗಿ ಕಂದಾಯ ಲೆಕ್ಕಾಚಾರ ನಡೆದ ಬಳಿಕ ಮುಂದಿನ ಹಂತದಲ್ಲಿ ಅದನ್ನು ಕಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article