ನಾಳೆ ಪುತ್ತೂರಿನಲ್ಲಿ ಅಟಲ್ ವಿರಾಸತ್: ಸತೀಶ್ ಕುಂಪಲ

ನಾಳೆ ಪುತ್ತೂರಿನಲ್ಲಿ ಅಟಲ್ ವಿರಾಸತ್: ಸತೀಶ್ ಕುಂಪಲ

ಮಂಗಳೂರು: ದೇಶ ಕಂಡ ಅಪ್ರತಿಮ ರಾಜಕಾರಣಿ, ಅದ್ಬುತ ಸಂಸದೀಯ ಪಟು, ವಾಗ್ಮೀ, ವಿದೇಶಾಂಗ ಸಚಿವರಾಗಿ, ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ, ಮೂರು ಬಾರಿ ದೇಶದ ಪ್ರಧಾನಿಯಾಗಿ, ಭಾರತೀಯ ಜನತಾ ಪಾರ್ಟಿಯ ಪ್ರಥಮ ಅಧ್ಯಕ್ಷರಾಗಿ ದೇಶಕ್ಕೆ ಅನನ್ಯ ಕೊಡುಗೆ ನೀಡಿದ ಅಜಾತಶತ್ರು, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ದೇಶಾದ್ಯಂತ ಬಿಜೆಪಿ ವತಿಯಿಂದ ಅಟಲ್ ವಿರಾಸತ್ ವಿಶೇಷ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನ.19 ರಂದು ಬೆಳಿಗ್ಗೆ 9.30ಕ್ಕೆ ಪುತ್ತೂರಿನ ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಪೂರ್ವಭಾವಿ ಸಭೆಗಳು, ಮಂಡಲ ಮಟ್ಟದ ಸಭೆಗಳು ಬೂತ್ ಸಭೆಗಳು ನಡೆದಿದೆ. ವಾಜಪೇಯಿಯವರ ಜೀವನದ ಸಾಧನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು, ಯೋಜನೆಗಳನ್ನು ಮೆಲುಕು ಹಾಕುವ ವಿಶೇಷ ಕಾರ್ಯಕ್ರಮ ಇದಾಗಲಿದೆ.

ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬೃಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ, ಪಕ್ಷದ ನಿಕಟಪೂರ್ವ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

ಪಕ್ಷದ ಕಾರ್ಯಕರ್ತರು, ಸದಸ್ಯರು, ಹಿತೈಷಿಗಳು ಅಟಲ್ ಜೀ ಅವರ ಸವಿಸ್ಮರಣೆಗಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ವಿನಂತಿಸುತ್ತಿದ್ದೇವೆ ಎಂದು ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article