ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ
Friday, November 14, 2025
ಮಂಗಳೂರು: ಭಾರತ ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಖಾತೆ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆ ಅವರು ನ.14 ರಂದು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಡಿ. ವೇದವ್ಯಾಸ್ ಕಾಮತ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಪೂಜಾ ಪ್ರಶಾಂತ್ ಪೈ, ರಮೇಶ್ ಕಂಡೆಟ್ಟು, ಮಹೇಶ್ ಜೋಗಿ, ನಂದನ್ ಮಲ್ಯ, ಲಖಿತಾ ಆರ್ ಶೆಟ್ಟಿ, ಸಂದ್ಯಾವೆಂಕಟೇಶ್, ವಿಜಯ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರು, ಮಂಡಲ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
