ಯಕ್ಷಗಾನ ಕಲಾವದರ ಬಗ್ಗೆ ಕೀಳುಮಟ್ಟದ ಹೇಳಿಕೆ-ಬಿಳಿಮಲೆ ಅತಿರೇಕ ವರ್ತನೆ ಸಹಿಸಲು ಸಾಧ್ಯವಿಲ್ಲ: ಕಾಮತ್ ಆಕ್ರೋಶ
Wednesday, November 19, 2025
ಮಂಗಳೂರು: ಯಕ್ಷಗಾನ ಕಲಾವಿದರ ಬಗ್ಗೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರದ್ದು ಅತಿರೇಕದ ವರ್ತನೆಯಾಗಿದ್ದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಯಕ್ಷಗಾನವು ಕರಾವಳಿ ಕರ್ನಾಟಕದ ಗಂಡು ಕಲೆಯಾಗಿದ್ದು, ಅದು ಭಕ್ತಿ ಭಾವದಿಂದ ಕೂಡಿದ ನಮ್ಮ ಸಂಸ್ಕೃತಿಯ ಭಾಗವಾಗಿದೆ. ಯಕ್ಷಗಾನ ಕಲಾವಿದರು ಸಮಾಜಕ್ಕೆ ನೀಡಿದ ಕೊಡುಗೆಗಾಗಿಯೇ ಅವರನ್ನು ಗೌರವಯುತವಾಗಿ ಕಾಣುವ ಸಮಾಜ ನಮ್ಮದು. ಹಿಂದೂ ಪರಂಪರೆಯನ್ನು ಸದಾ ಅವಹೇಳನ ಮಾಡುವುದನ್ನೇ ಪರಮ ಗುರಿಯಾಗಿಸಿಕೊಂಡಿರುವ ಎಡಪಂಥೀಯ ಬುದ್ದಿಜೀವಿಗಳು ನೀಡಿರುವ ಹೇಳಿಕೆ ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ, ಇಡೀ ಹಿಂದೂ ಸಮಾಜಕ್ಕಾದ ಅವಮಾನವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಹಿಂದೂ ಧರ್ಮದ ವಿರುದ್ಧ ದ್ವೇಷ ಕಾರುವವರನ್ನೇ ಹುಡುಕಿ ಪ್ರಮುಖ ಸ್ಥಾನದಲ್ಲಿ ಕೂರಿಸುವುದು ಕಾಂಗ್ರೆಸ್ಸಿನ ಹೀನ ಚಾಳಿಯಾಗಿದೆ. ಈ ಸರ್ಕಾರಕ್ಕೆ ಸೂಕ್ಷ್ಮ ಸಂವೇದನೆ ಎನ್ನುವುದು ಇದ್ದರೆ ಕರಾವಳಿಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಅವಮಾನಿಸಿದ ವ್ಯಕ್ತಿಯನ್ನು ಈ ಕೂಡಲೇ ಆ ಸ್ಥಾನದಿಂದ ಕಿತ್ತೆಸೆಯಬೇಕು ಎಂದು ಶಾಸಕರು ಆಗ್ರಹಿಸಿದರು.