ಯುವಕನ ಮೇಲೆ ದುಷ್ಕರ್ಮಿಗಳಿಂದ ದಾಳಿಗೆ ಯತ್ನ
Monday, November 24, 2025
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಹನುಮಾನ್ ಮಂದಿರದ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಮತ್ತೊಂದು ಸ್ಕೂಟರ್‌ನಲ್ಲಿ ಬಂದವರು ದಾಳಿಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದೆ.
ಪೂಪಾಡಿಕಲ್ಲು ನಿವಾಸಿ ಅಖಿಲೇಶ್ (28) ಗಾಯಾಳು.
ನಾಲ್ಕು-ಐದು ಮಂದಿಯಿಂದ ತಂಡದಾಳಿ ನಡೆಸಿರುವ ಶಂಕೆ ಇದ್ದು ಒಬ್ಬ ಪೊಲೀಸ್ ಅವರ ವಶದಲ್ಲಿರುವ ಮಾಹಿತಿ ಇದೆ. ಯುವಕನ ಕೈ ಭಾಗಕ್ಕೆ ಗಾಯಗಳಾಗಿದ್ದು, ಮೂಡುಬಿದ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಯಾಗುತ್ತಿದ್ದಾರೆ. ಇನ್ನಷ್ಟು ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ.
