ಸಫಾಯಿ ಕರ್ಮಚಾರಿ ಘಟಕದ ಜಿಲ್ಲಾಧ್ಯಕ್ಷರಾಗಿ ಮುರಳಿ ಅಶೋಕ್ ಸಾಲಪ್ಪ ಆಯ್ಕೆ
Wednesday, November 12, 2025
ಮಂಗಳೂರು: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನ ಮತ್ತು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರ ಶಿಫಾರಸ್ಸು ಮೇರೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಸಫಾಯಿ ಕರ್ಮಚಾರಿ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಪ್ರೇಮ್ನಾಥ್ ಪಿ.ಬಿ. ಬಳ್ಳಾಲ್ಭಾಗ್ ಅವರನ್ನು ನೇಮಿಸಿ ಕೆಪಿಸಿಸಿ ಸಫಾಯಿ ಕರ್ಮಚಾರಿ ಘಟಕದ ರಾಜ್ಯಾಧ್ಯಕ್ಷ ಮುರಳಿ ಅಶೋಕ್ ಸಾಲಪ್ಪ ಸೋಮವಾರ ಆದೇಶ ಹೊರಡಿಸಿದ್ದಾರೆ.
ಪ್ರೇಮ್ನಾಥ್ ಅವರು ಈ ಹಿಂದೆ ಮ.ನ.ಪಾ ನಾಮನಿರ್ದೇಶಿತ ಸದಸ್ಯರಾಗಿ, ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರಾಗಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ, ಡಿಸಿ ಮನ್ನಾ ಟಾಸ್ಕ್ ಫೋರ್ಸ್ ಕಮಿಟಿಯ ಮಂಗಳೂರು ತಾಲೂಕು ಸದಸ್ಯರಾಗಿ ಕಾರ್ಯನಿರ್ವಹಿಸಿದ್ದು, ಜಿಲ್ಲೆ ಮತ್ತು ಬ್ಲಾಕ್ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
ಸಾಮಾಜಿಕವಾಗಿಯೂ ಗುರುತಿಸಿಕೊಂಡಿರುವ ಅವರು ರಾಜ್ಯ ಆದಿದ್ರಾವಿಡ ಸಮಾಜದ ಮುಖಂಡರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.