ಸ್ವಾತಂತ್ರ್ಯ ಎಲ್ಲಿದೆಯೋ ಅಲ್ಲಿ ಭಾಷೆಗೆ ಅಸ್ಥಿತ್ವ: ರಾಜೇಶ್ ಶರ್ಮ
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಸ್ನಾತಕೋತ್ತರ ಮತ್ತು ಸ್ನಾತಕ ಹಿಂದಿ ವಿಭಾಗ, ಭಾಷಾ ಸಂಘ, ಬ್ಯಾಂಕ್ ಆಫ್ ಬರೋಡಾ ಹಾಗೂ ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಹಯೋಗಯಲ್ಲಿ ಆಯೋಜಿಸಲಾಗಿದ್ದ ಮೇಧಾವಿ-ವಿದ್ಯಾರ್ಥಿ ಸನ್ಮಾನ ಕಾರ್ಯಕ್ರಮ ಹಾಗೂ ಹಿಂದಿ ದಿವಸದ ಸಮಾರೋಪ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿಂದಿ ಭಾಷೆಯ ಮೂಲಕ ದೇಶದ ಸ್ಥಳೀಯ ಜನರೊಂದಿಗೂ ಸಂಪರ್ಕ ಸಾಧಿಸಬಹುದು. ಇತ್ತೀಚಿನ ದಿನಗಳಲ್ಲಿ ಹಿಂದಿ ಭಾಷೆಯ ಜಾಹೀರಾತು ಹೆಚ್ಚಾಗುತ್ತಿದೆ. ಆ ಮೂಲಕ ಭಾಷೆಯ ದೇಶದ ಉದ್ದಗಲಕ್ಕೂ ತಲುಪುತ್ತಿದೆ. ಅಲ್ಲದೇ, ಶಾಲಾ-ಕಾಲೇಜುಗಳಲ್ಲಿ ಹಿಂದಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಭಾಷೆಯ ಪರಿಚಯ ಮಾಡಿಸಬೇಕು ಎಂದರು.
ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಲಾವಣ್ಯಗೆ 11,000 ರೂ., ದ್ವಿತೀಯ ಸ್ಥಾನ ಪಡೆದ ಕಿಶೋರ್ಗೆ 7,500 ರೂ. ಚೆಕ್ ವಿತರಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಆರ್ಡಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿರಾಜ್, ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ. ಸುಮ. ಟಿ.ಆರ್. ಹಾಗೂ ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ ಪ್ರೊ. ನಾಗರತ್ನ ಎನ್. ರಾವ್ ಸೇರಿದಂತೆ ವಿಭಾಗದ ಇತರೆ ಉಪನ್ಯಾಸಕರು ಉಪಸ್ಥಿತರಿದ್ದರು.