ದೆಹಲಿಯ ಕೆಂಪು ಕೋಟೆ ಸಮೀಪದ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ: ಭಯೋದ್ಪಾದಕ ಕೃತ್ಯ ಖಂಡನೀಯ

ದೆಹಲಿಯ ಕೆಂಪು ಕೋಟೆ ಸಮೀಪದ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ: ಭಯೋದ್ಪಾದಕ ಕೃತ್ಯ ಖಂಡನೀಯ


ಮಂಗಳೂರು: ದೆಹಲಿಯ ಜನನಿಬಿಡ ಪ್ರವಾಸಿ ತಾಣವಾದ ಕೆಂಪು ಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಸೋಮವಾರ ರಾತ್ರಿ ಕಾರೊಂದರಲ್ಲಿ ಪ್ರಬಲ ಸ್ಫೋಟ ಸಂಭವಿಸಿದ ಪರಿಣಾಮ 10 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. 

ಈ ಮಹಾದುರಂತ ಸಂಭವಿಸುವ ಕೆಲವೇ ಗಂಟೆಗಳ ಮೊದಲು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹರಿಯಾಣದ ಫರಿದಾಬಾದ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳನ್ನು ಪತ್ತೆಯಾಗಿದ್ದು. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಫರಿದಾಬಾದ್‌ನ ಎರಡು ಮನೆಗಳಿಂದ 350 ಕೆ.ಜಿ. ಅಮೋನಿಯಂ ನೈಟ್ರೇಟ್ ಸೇರಿದಂತೆ ಸುಮಾರು 3,000 ಕೆ.ಜಿ. ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಘಟನೆಯ ಬೆನ್ನಲ್ಲೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದೆ. ಇದೊಂದು ಪೂರ್ವನಿಯೋಜಿತ ಭಯೋತ್ಪಾದಕ ಕೃತ್ಯ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. 

ಈ ಭಯೋತ್ಪಾದಕ ಕೃತ್ಯವನ್ನು ಬಲವಾಗಿ ಖಂಡಿಸುತ್ತೇವೆ. ಈ ಕೃತ್ಯಕ್ಕೆ ಬಲಿಯಾದವರಿಗೆ ವಿಶ್ವ ಹಿಂದೂ ಪರಿಷದ್ ಸಂತಾಪ ಸೂಚಿತ್ತದೆ, ಗಾಯಗೊಂಡವರು ಶೀಘ್ರ ಗುಣವಾಗಲೆಂದು ದೇವರ ಬಳಿ ಪ್ರಾರ್ಥಿಸುತ್ತೇವೆ. ಪೂರ್ವನಿಯೋಜಿತ ಭಯೋತ್ಪಾದಕ ಕೃತ್ಯದ ಹಿಂದೆ ಇರುವ ಜಾಲವನ್ನು ಭೇದಿಸಿ, ಈ ಕೃತ್ಯ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article